ರಾಜ್ಯ

ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಂತ ಹಂತವಾಗಿ ಪೂರ್ತಿ ಪಾವತಿಸಲಾಗುವುದು: ಸಿ.ಎಂ

  • 2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು
  • ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ: ಸಿ.ಎಂ

ಬೆಂಗಳೂರು : ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು.

ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.

2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಯವರ ಟೀಕೆಗಳಿಗೆ ಸಿ.ಎಂ ಸವಾಲು ಹಾಕಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago