ಬೆಂಗಳೂರು : ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು.
ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.
2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಯವರ ಟೀಕೆಗಳಿಗೆ ಸಿ.ಎಂ ಸವಾಲು ಹಾಕಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…