ಬೆಂಗಳೂರು: ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ವಿಸ್ತರಣೆ ಮಾಡಲಾಗಿದೆ.
ದಸರಾ ರಜೆ ವಿಸ್ತರಣೆ ಮಾಡಬೇಕೆಂದು ರಾಜ್ಯ ಸರ್ಕಾರಿ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದ ಹಲವು ಕಡೆ ಸಮೀಕ್ಷೆ ಪೂರ್ಣಗೊಂಡಿಲ್ಲ. ಶಿಕ್ಷಕರನ್ನು ಸಂಪೂರ್ಣವಾಗಿ ಸಮೀಕ್ಷೆಗೆ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಎಲ್ಲಾ ಶಾಲೆಗಳಿಗೆ ಅಕ್ಟೋಬರ್.18ರವರೆಗೆ ದಸರಾ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ನು ಜಾತಿಗಣತಿ ವೇಳೆ ಮೂವರು ಶಿಕ್ಷಕರು ಸಾವನ್ನಪ್ಪಿದ್ದು, ಮೃತ ಶಿಕ್ಷಕರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.





