ರಾಜ್ಯ

ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಪಾರ ಸೇವೆ ಹಾಗೂ ಕೊಡುಗೆ : ಕನ್ನಡ ಚಿತ್ರರಂಗದಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಕೊಡುಗೆ ಹಾಗೂ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ ಯಲ್ಲದೆ ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು ಎಂದರು.

ಡಾ: ರಾಜ್ ಕುಮಾರ್ ಮತ್ತು ಅವರ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿ ಯೂ ಅಭಿನಯಿಸಿದ್ದರು. ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ. ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರಾಜಕೀಯ, ಸಿನಿಮಾ, ಸಾಮಾಜಿಕ ವಿಚಾರಗಳನ್ನು ಚರ್ಚೆ ಮಾಡಿದ್ದೆವು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದು ಸಂತಾಪ ವ್ಯಕ್ತಡಿಸಿದರು.

ನೇತ್ರದಾನ ಮೂಲಕ ಸಮಾಜಮುಖಿ ಕೆಲಸ : ಅವರ ಎರಡು ಕಣ್ಣುಗಳನ್ನು ದಾನಮಾಡಿರುವುದು ಶ್ಲಾಘನೀಯ. ಸತ್ತ ನಂತರವೂ ಸಮಾಜಮುಖಿ ಕೆಲಸ ಮಾಡಿದ್ದಾರೆ. ಅಂಥ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ ಎಂದರು.

ಕೆಲ ವರ್ಷಗಳ ಹಿಂದೆ ಅವರ ಧರ್ಮಪತ್ನಿಯವರು ಮೃತಪಟ್ಟ ದಿನವೇ ದ್ವಾರಕೀಶ್ ಅವರೂ ಮೃತಪಟ್ಟಿದ್ದು, ಅವರಿಬ್ಬರ ಆತ್ಮಕ್ಕೆ ಶಾಂತಿ ದೊರಕಲಿ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

8 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

11 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

13 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

13 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

13 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

14 hours ago