ವಿಜಯಪುರ: ತಿಕೋಟ ಹಾಗೂ ವಿಜಯಪುರ ತಾಲ್ಲೂಕಿನ ಹಲವೆಡೆ ಭೂಕಂಪನದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ.
ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತ್ರಿಕೋಟ ತಾಲ್ಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಶುಕ್ರವಾರ ರಾತ್ರಿ 10.01ಕ್ಕೆ ಭೂಕಂಪನದ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತ ಮುತ್ತ ಭೂಕಂಪನದ ಅನುಭವ ಆಗಿದೆ.
ಇದನ್ನು ಓದಿ: ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು
ಭೂಕಂಪನ ಆಪ್‌ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ ಮೇಲೆ ಇಂತಹ ಅನುಭವ ಆಗುತ್ತಿರುವುದರಿಂದ ಜನ ಆತಂಕಕ್ಕೀಡಾಗಿದ್ದಾರೆ. ಭೂಮಿ ಕಂಪಿಸಿದ ಅನುಭವ ಆದ ತಕ್ಷಣವೇ ಹಲವು ಜನರು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.
ಕಳೆದ ತಿಂಗಳು ಸಿಂದಗಿ ಪಟ್ಟಣದಲ್ಲಿ ಕೂಡ ಸರಣಿ ಭೂಕಂಪನದ ಅನುಭವವಾಗಿತ್ತು. ಈಗ ನಗರ ಭಾಗದಲ್ಲಿ ಕಂಪನದ ಅನುಭವ ಆಗಿ ಜನತೆಯಲ್ಲಿ ಹೆಚ್ಚಿನ ಆತಂಕ ಮೂಡಿಸಿದೆ.
ಇನ್ನು ಈ ಕುರಿತು ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದು, ಭೂಮಿ ಆಗಾಗ್ಗೆ ಕಂಪಿಸಲು ಏನೆಲ್ಲಾ ಕಾರಣವಿರಬಹುದು ಎಂದು ಕೂಲಂಕುಷವಾಗಿ ಅಧ್ಯಯನ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…