ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ.
ಇದನ್ನು ಓದಿ: ಮೈಸೂರು| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗು ಸಾವು
ಇಂದು ಬೆಳಿಗ್ಗೆ 8.30ರ ಸುಮಾರಿಗೆ ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಈ ವೇಳೆ ಆತಂಕಗೊಂಡ ಗ್ರಾಮಸ್ಥರು, ಮನೆಯಿಂದ ಹೊರ ಬಂದಿದ್ದಾರೆ.
ಘಟನಾ ಸ್ಥಳಕ್ಕೆ ಭೂ ವಿಜ್ಞಾನಿಗಳು ಧಾವಿಸಿ ಪರಿಶೀಲನೆ ನಡೆಸಿದ್ದು, ಇದೊಂದು ಸಣ್ಣ ಪ್ರಮಾಣದ ಕಂಪನ ಎಂದು ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ.





