ರಾಜ್ಯ

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಇದುವರೆಗೆ 1.31 ಲಕ್ಷ ಕೋಟಿಯನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ ಎಂದರು.

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.

ವಿಬಿಜಿರಾಮ್ ಜಿ ಕಾಯ್ದೆ ಉದ್ಯೋಗದ ಭರವಸೆ ನುಂಗಿದೆ
ಸಮಪಾಲು, ಸಮಬಾಳು ಎನ್ನುವ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಮ್ಮ ಸರ್ಕಾರ. ಕೇಂದ್ರ ಸರ್ಕಾರ ಉದ್ಯೋಗದ ಭರವಸೆಯನ್ನು ನುಂಗುವ ವಿಬಿಜಿರಾಮ್ ಜಿ ಯೋಜನೆಯನ್ನು ತರಲಾಗಿದೆ. ಕೇಂದ್ರ ಬಿಜೆಪಿಯವರಿಂದ ಕೇವಲ ಕಾರ್ಪೊರೇಟ್ ಶಕ್ತಿಗಳು ಬಲಗೊಳ್ಳುತ್ತಿದ್ದು, ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಎಂದರು.

ಸಾಮಾಜಿಕ ನ್ಯಾಯದಲ್ಲಿ ನಂಬಿಕೆ  ಇಟ್ಟಿರುವ ಕಾಂಗ್ರೆಸ್

ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟುಕೊಂಡಿರುವ ಪಕ್ಷ ನಮ್ಮದು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ರಕ್ಷಣೆ ದೊರೆಯಬೇಕು. ದುರ್ಬಲ ವರ್ಗದವರಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಶಕ್ತಿ ಯಿಲ್ಲದವರಿಗೆ ಆದ್ಯತೆ ಮೇರೆಗೆ ರಕ್ಷಣೆ ನೀಡಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಇದು ನಮ್ಮ ಸರ್ಕಾರದ ಧ್ಯೇಯ ಎಂದರು.

ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿದೆ
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷ ವನ್ನು ಬೆಂಬಲಿಸಬೇಕು. ಬಿಜೆಪಿ ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದರು.

ಸ್ವಾತಂತ್ರ್ಯ ಲಭಿಸದೆ ಹೋಗಿದ್ದರೆ ನಾವು ಗುಲಾಮರಾಗಿಯೇ ಇರುತ್ತಿದ್ದೆವು. ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿಯವರು ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರ ಮಾಡಿದ್ದಾರೆ. ಏನು ಮಾಡಿದ್ದಾರೆ ಎಂದು ಅವರು ಜನರ ಮುಂದೆ ಹೇಳುವುದೇ ಇಲ್ಲ. ಅದರ ಬದಲಿಗೆ ನಮ್ಮ ಸರ್ಕಾರವನ್ನು ಟೀಕೆ , ಅಪಪ್ರಚಾರ ಮಾಡಿಕೊಂಡು ಓಡಾಡಿದ್ದಾರೆ. ಬಿಜೆಪಿ ನುಡಿದಂತೆ ನಡೆದ ಪಕ್ಷವಲ್ಲ ಎಂದರು.

ದೇಶದಲ್ಲಿ ರೈತರಿಗೆ ಉಳುವವನೇ ಭೂಮಿಯ ಒಡೆಯ ಎಂದು ಮಾಡಿದ್ದು, ಮಲ ಹೊರುವ ಪದ್ದತಿ ನಿಷೇಧ, ಸಾಲ ಮನ್ನಾ ಮಾಡಿದ್ದು, ಕಾಂಗ್ರೆಸ್ ಸರ್ಕಾರ. ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ. ನಮ್ಮ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿ ಮಾಡಿದೆ. ಇದನ್ನು ಬಿಜೆಪಿ ಏಕೆ ಮಾಡಲಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

2 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

2 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

3 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

3 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

4 hours ago

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

4 hours ago