ಬಳ್ಳಾರಿ: ಕಾಂಗ್ರೆಸ್ ಶಾಸಕ ನಾ.ರಾ. ಭರತ್ ರೆಡ್ಡಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಇಂದು ಬೆಳಗ್ಗೆ 6:30ಕ್ಕೆ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಏಕಕಾಲಕ್ಕೆ ಆಗಮಿಸಿದ ಅಧಿಕಾರಿಗಳು ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿದ್ದು ಸಂಬಂಧಪಟ್ಟ ಕಾಗದ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಿಂದ ಆಗಮಿಸಿದ ಹತ್ತಾರು ಈಡಿ ಅಧಿಕಾರಿಗಳು ಸಿಬ್ಬಂದಿ ತಂಡ. ಶಾಸಕ ನಾರಾ ಭರತ್ ರೆಡ್ಡಿ ನಿವಾಸಕ್ಕೆ ಭದ್ರತಾ ಸಿಬ್ಬಂದಿಯೊಂದಿಗೆ ಆಗಮಿಸಿದ ಇಡಿ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ.