ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಮುಡಾ ಕಚೇರಿಗೆ ಮೂರು ಬಾರಿ ನೋಟಿಸ್ ನೀಡಿ, ಒಂದು ಬಾರಿ ಸಮನ್ಸ್ ಜಾರಿ ಮಾಡಿದ್ದರಂತೆ ಆದರೂ ಮುಡಾ ಅಧಿಕಾರಿಗಳು ಉತ್ತರ ನೀಡಿರಲಿಲ್ಲವಂತೆ ಹೀಗಾಗಿ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಇ.ಡಿ.ಅಧಿಕಾರಿಗಳು ಮುಡಾ ಮೇಲೆ ದಾಳಿ ಮಾಡಿದರೆ ಮಾಡಲಿ ಬಿಡಿ. ಇ.ಡಿ.ಅಧಿಕಾರಿಗಳೇ ಕಚೇರಿಯ ಎಲ್ಲಾ ದಾಖಲೆಗಳನ್ನು ಪರಿಶೀಲಿಸುತ್ತಾರೆ. ದಾಖಲೆಗಳನ್ನು ತಿದ್ದಲೂ ಯಾರಿಂದಲೂ ಸಾಧ್ಯವಿಲ್ಲ. ಇ.ಡಿ.ಅಧಿಕಾರಿಗಳ ಕೆಲಸವನ್ನು ಮಾಡಲು ಬಿಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.