ರಾಜ್ಯ

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಮುಡಾ ಕಚೇರಿಗೆ ಮೂರು ಬಾರಿ ನೋಟಿಸ್ ನೀಡಿ, ಒಂದು ಬಾರಿ ಸಮನ್ಸ್‌ ಜಾರಿ ಮಾಡಿದ್ದರಂತೆ ಆದರೂ ಮುಡಾ ಅಧಿಕಾರಿಗಳು ಉತ್ತರ ನೀಡಿರಲಿಲ್ಲವಂತೆ ಹೀಗಾಗಿ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ‌

ಇ.ಡಿ.ಅಧಿಕಾರಿಗಳು ಮುಡಾ ಮೇಲೆ ದಾಳಿ ಮಾಡಿದರೆ ಮಾಡಲಿ ಬಿಡಿ. ಇ.ಡಿ.ಅಧಿಕಾರಿಗಳೇ ಕಚೇರಿಯ ಎಲ್ಲಾ ದಾಖಲೆಗಳನ್ನು ಪರಿಶೀಲಿಸುತ್ತಾರೆ. ದಾಖಲೆಗಳನ್ನು ತಿದ್ದಲೂ ಯಾರಿಂದಲೂ ಸಾಧ್ಯವಿಲ್ಲ. ಇ.ಡಿ.ಅಧಿಕಾರಿಗಳ ಕೆಲಸವನ್ನು ಮಾಡಲು ಬಿಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

1 hour ago

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…

2 hours ago

28 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ…

2 hours ago

ರಾಗಿ ಖರೀದಿ ಕೇಂದ್ರದಲ್ಲಿ ಹೆಚ್ಚುತ್ತಿರುವ ಅಕ್ರಮ: ಆರೋಪ

ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…

2 hours ago

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

11 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

12 hours ago