dharmastal case
ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್‌ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶ ಮಾಡಿದೆ.
ಕರ್ನಾಟಕ ಸೇರಿದಂತೆ ದೇಶದ ಕೆಲವು ಮುಂಚೂಣಿಯಲ್ಲಿರುವ ಎನ್‌ಜಿಒಗಳಿಗೆ ವಿದೇಶದಿಂದ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ಭಾರೀ ಪ್ರಮಾಣದ ಹಣ ಹರಿದುಬಂದಿದೆ ಎಂಬುದನ್ನು ಇ.ಡಿ ಪತ್ತೆ ಮಾಡಿದೆ.
ಇದೀಗ ಮಾನವಹಕ್ಕುಗಳು, ಮಹಿಳಾಪರ ಹೋರಾಟ ನಡೆಸುವ ಸಂಘಸಂಸ್ಥೆಯವರು ಸೇರಿದಂತೆ ರಾಜ್ಯದ ಕೆಲವು ಎನ್‌ಜಿಒಗಳ ಹಣದ ವಹಿವಾಟು ನಡೆದಿರುವ ಕುರಿತು ಇಡಿ ನೋಟಿಸ್ ನೀಡಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ.
ಮೇಲ್ನೋಟಕ್ಕೆ ಧರ್ಮಸ್ಥಳದ ವಿರುದ್ಧ ಎನ್‌ಜಿಒಗಳಿಗೆ ಹಣ ಜಮೆಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇದರ ಸತ್ಯಾಸತ್ಯತೆಯನ್ನು ಪತ್ತೆ ಮಾಡಲು ರಾಜ್ಯದ ನಾಲ್ಕಕ್ಕೂ ಹೆಚ್ಚು ಎನ್‌ಜಿಒಗಳಿಗೆ ನೋಟೀಸ್ ನೀಡಲು ಮುಂದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ(ಎಸ್‌ಬಿಐ), ಯೂನಿಯನ್ ಬ್ಯಾಂಕ್ ಆಫ್ ಇಂಡಿಯ(ಯುಬಿಐ), ಐಸಿಐಸಿಐ ಸೇರಿದಂತೆ ಕೆಲವು ಪ್ರತಿಷ್ಠಿತ ಬ್ಯಾಂಕ್‌ಗಳ ಖಾತೆಗಳಿಗೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮ) ಉಲ್ಲಂಘಿಸಿ ದೇಣಿಗೆ ರೂಪದಲ್ಲಿ ಹಣ ಪಡೆದಿರುವುದು ಕಂಡುಬಂದಿದೆ ಎನ್ನಲಾಗುತ್ತಿದೆ.
ಪ್ರಸ್ತುತ ವಿಶೇಷ ತನಿಖಾ ತಂಡ(ಎಸ್‌ಐಟಿ )ದ ವಶದಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತನಿಖೆ ವೇಳೆ ಬಾಯ್ಬಿಟ್ಟಿರುವ ಮಾಹಿತಿಯಂತೆ ತನಗೆ ಯಾರೆಲ್ಲ ಹಣದ ಆಮಿಷವೊಡ್ಡಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾನೆ ಎಂದು ತಿಳಿದುಬಂದಿದೆ.
ಬಂಧನದ ನಂತರ ಹಲವಾರು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವುದರಿಂದ ಪ್ರಕರಣವನ್ನು ಬೇಧಿಸಲು ಇಡಿ ಅಖಾಡಕ್ಕಿಳಿದಿದೆ. ಫೆಮಾ ಕಾಯ್ದೆ ಉಲ್ಲಂಘಿಸಿ ದೇಣಿಗೆ ಪಡೆದಿರುವುದು ಕಂಡುಬಂದಲ್ಲಿ ಎನ್‌ಜಿಒಗಳಿಗೆ ಕಾನೂನಿನ ಸಂಕಷ್ಟ ಎದುರಾಗಲಿದೆ.
ಅಲ್ಲದೆ ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೊರಟ್ಟಿದ್ದ ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…