ರಾಜ್ಯ

ಇಡಿ ನೋಟಿಸ್‌: ರಾಜಕೀಯ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ರಾಜಕೀಯ ಪಿತೂರಿ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷವನ್ನು ಕೆಳಗಿಳಿಸುವ ದುರುದ್ದೇಶದಿಂದ ಸಿಎಂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್‌ ಅವರಿಗೆ ಇಡಿ ನೋಟಿಸ್‌ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ಕೋರ್ಟ್‌ ಅನೇಕ ಬಾರಿ ತೀರ್ಪು ನೀಡಿವೆ. ಆದರೂ ರಾಜಕೀಯ ದುರುದ್ದೇಶದಿಂದ ಈ ರೀತಿ ಆಗುತ್ತಿದೆ. ನನ್ನ ವಿರುದ್ಧದ ಪ್ರಕರಣದಲ್ಲೂ ಇದೇ ರೀತಿ ಆಗಿತ್ತು ಎಂದು ತಿಳಿಸಿದರು.

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ವಿಚಾರವಾಗಿ ಪ್ರಶ್ನೆ ಬಂದಾಗ, ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ನಡೆಸಿದ್ದವು. ಎರಡು ಸಂಸ್ಥೆಗಳು ಒಟ್ಟಿಗೆ ಒಂದೇ ಪ್ರಕರಣವನ್ನು ತನಿಖೆ ನಡೆಸುವಂತಿಲ್ಲ. ಈ ವಿಚಾರವಾಗಿ ನನ್ನ ಪ್ರಕರಣದ ತೀರ್ಪುಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೇನೆ ಎಂದು ಹೇಳಿದರು.

ಸಿಎಂ ಹುದ್ದೆ ವಿಚಾರವಾಗಿ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿ, ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

14 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

16 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

22 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

29 mins ago