ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ವಿಚಾರಣೆ ಹಾಜರಾಗುವಂತೆ ಇ.ಡಿ.ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣದಲ್ಲಿ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ ಹಾಗೂ ಮುಡಾದಿಂದ ಕಡತಗಳನ್ನು ತೆಗೆದುಕೊಂಡು ಹೋಗಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ.ತನಿಖಾ ಸಂಸ್ಥೆಯೂ ಈ ಇಬ್ಬರಿಗೆ ನೋಟಿಸ್ ಜಾರಿ ಮಾಡಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರು ಇ.ಡಿ.ನೋಟಿಸ್ ನೀಡಿರುವ ಬಗ್ಗೆ ಪ್ರಶ್ನಿಸಿ ಹೈಕೋರ್ಟ್‌ಗೆ ರಿರ್ಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಇಂದು(ಜನವರಿ.27) ಕಲಾಪದ ಕೊನೆಗೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನನ್ನ ಅವರಿರುವ ಏಕಸದಸ್ಯ ಪೀಠವೂ ಹೇಳಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಧಾರವಾಡದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆಯೇ ಪಾರ್ವತಿ ಮತ್ತು ಬೈರತಿ ಸುರೇಶ್ ಅವರು ತುರ್ತು ಅರ್ಜಿ ಸಲ್ಲಿಸಿದ್ದಾರೆ.