ತಿರುವನಂತಪುರಂ: ಮಸಾಲಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ದಾಖಲಾದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸಿಎಂ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಜೊತೆಗೆ ಮಾಜಿ ಹಣಕಾಸು ಸಚಿವ ಹಾಗೂ ಸಿಪಿಎಂ ನಾಯಕ ಥಾಮಸ್ ಐಸಾಕ್ ಕಿಫ್ ಬಿ, ಮುಖ್ಯ ನಿರ್ವಹಣಾಧಿಕಾರಿ ಕೆ.ಎಂ.ಅಬ್ರಾಹಂ ಅವರಿಗೂ ನೋಟಿಸ್ ನೀಡಿದೆ.
ಕಳೆದ 2019ರಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಮಾಡಿ ಮಸಾಲಾ ಬಾಂಡ್‌ಗಳ ಮೂಲಕ ಕಿಫ್ ಬಿ 2150 ಕೋಟಿ ಸಂಗ್ರಹಣೆ ಮಾಡಿತ್ತು ಎಂದು ಆರೋಪಿಸಲಾಗಿದೆ.





