ರಾಜ್ಯ

ಮುಡಾ ಹಗರಣ: ಪಾರ್ವತಿ ಸಿದ್ದರಾಮಯ್ಯ ಅವರಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ.ನೋಟಿಸ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಇ.ಡಿ.ತನಿಖಾಧಿಕಾರಿ ವಿ.ಮುರುಳಿಕಣ್ಣನ್‌ ಎಂಬ ಹೆಸರಿನಲ್ಲಿ ನಾಳೆ ವಿಚಾರಣೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದೆ.

ಮುಡಾ ಹಗರಣದ ಬಗ್ಗೆಯ ತನಿಖೆಗಾಗಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಜನವರಿ.3 ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ.ತನಿಖಾ ಅಧಿಕಾರಿಗಳು ನೋಟಿಸ್‌ ನೀಡಿ, ಜನವರಿ.9ಕ್ಕೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದರು. ಆ ವೇಳೆ ಸಿಎಂ ಪತ್ನಿ ಪಾರ್ವತಿಯವರು ದಾಖಲೆಗಳ ಸಂಗ್ರಹಕ್ಕಾಗಿ ಕಾಲಾವಕಾಶ ಕೋರಿ ಮನವಿ ಮಾಡಿದ್ದರು. ಆದರೆ ಇದೀಗ ಮೊದಲ ನೋಟಿಸ್‌ಗೆ ವಿಚಾರಣೆಗೆ ಬಾರದ ಹಿನ್ನೆಲೆಯಲ್ಲಿ ಜನವರಿ.24 ರಂದು ನೋಟಿಸ್‌ ಜಾರಿ ಮಾಡಿದೆ.

ಈ ನೋಟಿಸ್‌ನ ಅನ್ವಯ ಜನವರಿ.28(ನಾಳೆ) ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದ ಇ.ಡಿ.ಕಚೇರಿಗೆ ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿಗೊಳಿಸಿದೆ.

ನೋಟಿಸ್‌ನಲ್ಲಿ ಏನಿದೆ?

ಮುಡಾ  ಹಗರಣದ ವಿಚಾರವಾಗಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಪಿಎಂಎಲ್‌ಎ ಸೆಕ್ಷನ್‌ಗಳನ್ನು ಉಲ್ಲೇಖಿಸಿ, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ  ತನಿಖಾಧಿಕಾರಿ ವಿ.ಮುರುಳಿಕಣ್ಣನ್‌ ಅವರ ಹೆಸರಿನಲ್ಲಿ ಇ.ಡಿ.ಸಂಸ್ಥೆಯೂ ನೋಟಿಸ್‌ ನೀಡಿದೆ.

ನನ್ನ ಪತ್ನಿಗೆ ನೋಟಿಸ್‌ ಬಂದಿರುವುದು ನಿಜ

ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ನನ್ನ ಪತ್ನಿಗೆ ಇ.ಡಿ.ಅಧಿಕಾರಿಗಳು ನೋಡಿರುವುದು ನಿಜ. ನನ್ನ ಪತ್ನಿಗೆ ಇ.ಡಿ.ಸಂಸ್ಥೆಯಿಂದ ನೋಟಿಸ್‌ ಬಂದಿರುವುದು ನಿಜ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

5 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

5 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

6 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

6 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

7 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

7 hours ago