ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ ದುರುದ್ದೇಶಪೂರ್ವಕವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಇಂದು ಮುಡಾ ಕಚೇರಿಯ ಮೇಲೆ ಇ.ಡಿ.ದಾಳಿ ಮಾಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಂದ ಇ.ಡಿ. 10 ರಿಂದ 15 ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿಕೊಂಡು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಆದರೆ, ಮುಡಾ ಹಗರಣದಲ್ಲಿ ಯಾವುದೇ ರೀತಿಯ ಹಣದ ಅವ್ಯವಹಾರ ನಡೆದಿಲ್ಲ. ಇಂದಿನ ಇ.ಡಿ.ದಾಳಿಯ ಪರಿಶೀಲನೆ ರಾಜಕೀಯ ಪ್ರೇರಿತವಾಗಿದೆ. ಇ.ಡಿ.ಅಧಿಕಾರಿಗಳು ತನಿಖೆ ನಡೆಸಬೇಕೆಂಬ ಪ್ರೊಸೀಸರ್‌ನಿಂದ ತನಿಖೆ ನಡೆಸುತ್ತಿದ್ದಾರೆ. ನಡೆಸಲಿ, ತನಿಖೆ ಮುಗಿದ ನಂತರ ಅವರಿಗೆ ಮುಡಾದಲ್ಲಿ ಸಿದ್ದರಾಮಯ್ಯ ಅವರು ಅಕ್ರಮ ನಡೆಸಿಲ್ಲ ಎಂಬ ಸತ್ಯಾಂಶ ತಿಳಿಯುತ್ತದೆ ಎಂದು ಸಮರ್ಥಿಸಿಕೊಂಡರು.