Mysore
27
haze

Social Media

ಸೋಮವಾರ, 30 ಮಾರ್ಚ್ 2026
Light
Dark

ಸಚಿವ ಪರಮೇಶ್ವರ್‌ಗೆ ʼಇಡಿʼ ಶಾಕ್‌ ; ಸಿದ್ದಾರ್ಥ್‌ ಶಿಕ್ಷಣ ಸಂಸ್ಥೆ ಮೇಲೆ ದಾಳಿ

G Parameshwara

ತುಮಕೂರು : ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ, ಸಿದ್ಧಾರ್ಥ ಎಂಜಿನಿಯರಿಂಗ್‌ ಕಾಲೇಜು, ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಚೇರಿ ಹಾಗೂ ನೆಲಮಂಗಲದ ಟಿ.ಬೇಗೂರು ಬಳಿಯ ಸಿದ್ಧಾರ್ಥ ವೈದ್ಯಕೀಯ ಕಾಲೇಜುಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:- ಬೂಕರ್‌ ಪ್ರಶಸ್ತಿ ಲೇಖನಿ ಬಾನು ಮುಷ್ತಾಕ್‌ಗೆ ಸಿಎಂ ಅಭಿನಂದನೆ

ಬೆಳ್ಳಂಬೆಳಿಗ್ಗೆಯೇ ಪ್ರತ್ಯೇಕ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 30ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.

Tags:
error: Content is protected !!