ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್ ಎದುರಾಗಿದ್ದು, ಬೆಂಗಳೂರಿನ ಐದು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಐದು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಹಾಗೂ ಅವರ ಕುಟುಂಬದವರಿಗೆ ಸೇರಿದ ಮನೆ ಮೇಲೆ ದಾಳಿ ನಡೆಸಲಾಗಿದೆ.
ವಿದೇಶಗಳಲ್ಲಿ ಸುಬ್ಬಾರೆಡ್ಡಿ ಆಸ್ತಿ ಹೊಂದಿದ್ದು ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಾಹಿತಿಯ ಪ್ರಕಾರ ಹಲವಾರು ದಾಖಲೆಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಸುಬ್ಬಾರೆಡ್ಡಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.





