ಚಿತ್ರದುರ್ಗ: ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ನಡುವೆ ಕೆ.ಸಿ.ವೀರೇಂದ್ರ ಪಪ್ಪು ಬಂಧನ ಪ್ರಶ್ನಿಸಿ ಅವರ ಪತ್ನಿ ಚೈತ್ರಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ದುಬೈನಲ್ಲಿರುವ ಕ್ಯಾಸಿನೋ ಸೆಂಟರ್‌ಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು.





