ed raids
ಬೆಂಗಳೂರು : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜಾಮೀನಿನ ಮೇರೆಗೆ ಹೊರಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಸಂಬಂಧಿಸಿದಂತೆ ದೇಶದ ವಿವಿಧ ಕಡೆಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ನಗದು ಹಾಗೂ ಕೆ.ಜಿಗಟ್ಟಲೆ ಚಿನ್ನ ವಶಕ್ಕೆ ಪಡೆದುಕೊಂಡಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್ ಎ) ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು ಕಳೆದ ಬುಧವಾರ ಹಾಗೂ ಗುರುವಾರ ಕಾರವಾರದಲ್ಲಿ ಶಾಸಕರ ನಿವಾಸ, ಗೋವಾ, ಮುಂಬೈ ಹಾಗೂ ದೆಹಲಿ ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು.
ಪರಿಶೀಲನೆ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲಾತಿಗಳು ದೊರೆತಿವೆ. ಇದಕ್ಕೆ ಪೂರಕವಾಗಿ ಇಮೇಲ್ ಮಾಡಿರುವುದು ಗೊತ್ತಾಗಿದೆ. ತಪಾಸಣೆ ವೇಳೆ 1.68 ಕೋಟಿ ನಗದು, 6.75 ಕೆ.ಜಿ ಮೌಲ್ಯದ ಚಿನ್ನದ ಬಿಸ್ಕತ್ಗಳು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 14.13 ಕೋಟಿ ರೂ. ಹಣವನ್ನ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮದ ನಿವಾಸಿಯಾಗಿರುವ ಸತೀಶ್ ಮನೆಯಲ್ಲಿ ಅಧಿಕಾರಿಗಳು ಸತತ 22 ಗಂಟೆಗಳ ಕಾಲ ಶೋಧ ಕಾರ್ಯ ಕೈಗೊಂಡಿದ್ದರು. ದಾಳಿ ವೇಳೆ ಸತೀಶ್ ಮನೆಯಲ್ಲಿ ಇರಲಿಲ್ಲ. ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಅವರ ಅಂಗರಕ್ಷಕರನ್ನು ಸಂಪರ್ಕಿಸಿದರೂ ಶಾಸಕರ ಸುಳಿವು ಬಗ್ಗೆ ಪತ್ತೆಯಾಗಿರಲಿಲ್ಲ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಈ ಸಂಬಂಧ ಹೈಕೋರ್ಟ್, ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಸತೀಶ್ ಅವರ ಮೇಲೆ ಸಿಬಿಐ ಹಾಗೂ ಲೋಕಾಯುಕ್ತ ತನಿಖೆಯ ವಿಚಾರಣೆ ಎದುರಿಸುತ್ತಿದ್ದಾರೆ.
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…