ರಾಜ್ಯ

ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ : ಕೋಟ್ಯಾಂತರ ರೂ ನಗದು, ಕೆಜಿಗಟ್ಟಲೆ ಚಿನ್ನ ವಶಕ್ಕೆ

ಬೆಂಗಳೂರು : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜಾಮೀನಿನ ಮೇರೆಗೆ ಹೊರಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್​ಗೆ ಸಂಬಂಧಿಸಿದಂತೆ ದೇಶದ ವಿವಿಧ ಕಡೆಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ನಗದು ಹಾಗೂ ಕೆ.ಜಿಗಟ್ಟಲೆ ಚಿನ್ನ ವಶಕ್ಕೆ ಪಡೆದುಕೊಂಡಿದೆ.

ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್ ಎ) ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು ಕಳೆದ ಬುಧವಾರ ಹಾಗೂ ಗುರುವಾರ ಕಾರವಾರದಲ್ಲಿ ಶಾಸಕರ ನಿವಾಸ, ಗೋವಾ, ಮುಂಬೈ ಹಾಗೂ ದೆಹಲಿ ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು.

ಪರಿಶೀಲನೆ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲಾತಿಗಳು ದೊರೆತಿವೆ. ಇದಕ್ಕೆ ಪೂರಕವಾಗಿ ಇಮೇಲ್ ಮಾಡಿರುವುದು ಗೊತ್ತಾಗಿದೆ. ತಪಾಸಣೆ ವೇಳೆ 1.68 ಕೋಟಿ ನಗದು, 6.75 ಕೆ.ಜಿ ಮೌಲ್ಯದ ಚಿನ್ನದ ಬಿಸ್ಕತ್​ಗಳು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 14.13 ಕೋಟಿ ರೂ. ಹಣವನ್ನ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮದ ನಿವಾಸಿಯಾಗಿರುವ ಸತೀಶ್ ಮನೆಯಲ್ಲಿ ಅಧಿಕಾರಿಗಳು ಸತತ 22 ಗಂಟೆಗಳ ಕಾಲ ಶೋಧ ಕಾರ್ಯ ಕೈಗೊಂಡಿದ್ದರು. ದಾಳಿ ವೇಳೆ ಸತೀಶ್ ಮನೆಯಲ್ಲಿ ಇರಲಿಲ್ಲ. ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಅವರ ಅಂಗರಕ್ಷಕರನ್ನು ಸಂಪರ್ಕಿಸಿದರೂ ಶಾಸಕರ ಸುಳಿವು ಬಗ್ಗೆ ಪತ್ತೆಯಾಗಿರಲಿಲ್ಲ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಈ ಸಂಬಂಧ ಹೈಕೋರ್ಟ್, ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಸತೀಶ್ ಅವರ ಮೇಲೆ ಸಿಬಿಐ ಹಾಗೂ ಲೋಕಾಯುಕ್ತ ತನಿಖೆಯ ವಿಚಾರಣೆ ಎದುರಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

15 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

16 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

17 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

21 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

21 hours ago