satishc sail
ಕಾರವಾರ: ಬೆಳ್ಳಂಬೆಳಿಗ್ಗೆ ಕಾರವಾರ ತಾಲ್ಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಸಶಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಈ ವೇಳೆ ಯಾರೂ ಕೂಡ ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಮನೆಯಲ್ಲಿರುವ ಕೆಲಸದವರನ್ನು ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಸಂಬಂಧ ಶಾಸಕರಿಗೂ ಬುಲಾವ್ ಹೋಗಿದೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು.
ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲಯದಿಂದ ಶಿಕ್ಷೆ ಕೂಡ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು.
ಈಗ ಆದಾಯಕ್ಕಿಂತ ಅಧಿಕ ಹಣ ಮಾಡಿರುವ ಆರೋಪ ಸಹ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…