ರಾಜ್ಯ

ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇಡಿ ದಾಳಿ

ಕಾರವಾರ: ಬೆಳ್ಳಂಬೆಳಿಗ್ಗೆ ಕಾರವಾರ ತಾಲ್ಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇಡಿ ಅಧಿಕಾರಿ ಕೇಶವ್‌ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಸಶಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಈ ವೇಳೆ ಯಾರೂ ಕೂಡ ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಮನೆಯಲ್ಲಿರುವ ಕೆಲಸದವರನ್ನು ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಸಂಬಂಧ ಶಾಸಕರಿಗೂ ಬುಲಾವ್‌ ಹೋಗಿದೆ.

ಮಲ್ಲಿಕಾರ್ಜುನ ಶಿಪ್ಪಿಂಗ್‌ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್‌ ಸೈಲ್‌ ಈ ಹಿಂದೆ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು.

ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್‌ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲಯದಿಂದ ಶಿಕ್ಷೆ ಕೂಡ ವಿಧಿಸಲಾಗಿತ್ತು. ಹೈಕೋರ್ಟ್‌ ಮೂಲಕ ಜಾಮೀನು ಪಡೆದು ಸತೀಶ್‌ ಸೈಲ್‌ ಹೊರಬಂದಿದ್ದರು.

ಈಗ ಆದಾಯಕ್ಕಿಂತ ಅಧಿಕ ಹಣ ಮಾಡಿರುವ ಆರೋಪ ಸಹ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago