Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ವಿದ್ಯಾವಂತರೇ ಹೆಚ್ಚು ಜಾಂತಿವಾದಿಗಳಾಗುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ಬೇಸರ

ಬೆಂಗಳೂರು: ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚಾಗುತ್ತಾ ಹೋಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ 21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ ಎಂಬ ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಗಿನ ಕಾಲದಿಂದಲೂ ಇರುವ ಜಾತಿ ವ್ಯವಸ್ಥೆಯಿಂದಲೇ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಎಲ್ಲಾ ಕಡೆ ಅಸಮಾನತೆ ಹೆಚ್ಚಾಯಿತು. ವಿದ್ಯಾವಂತರೇ ಹೆಚ್ಚು ಹೆಚ್ಚು ಜಾತಿವಾದಿಗಳಾಗುತ್ತಿರುವುದು ದೇಶದ ದೊಡ್ಡ ದುರಂತವಾಗಿದೆ.

ಜಾತಿ ಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದು ಕಿವಿಮಾತು ಹೇಳಿದರು.

ಜವಾಹರ್‌ಲಾಲ್‌ ನೆಹರೂ ಅವರು ವೈಜ್ಞಾನಿಕ ಮತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು ಎಂದರು.

ನಾವೆಲ್ಲರೂ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ. ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೆ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಾಗಿದೆ ಎಂದರು.

 

Tags: