ರಾಜ್ಯ

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು.

ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ ಹೆಚ್ಚಾಗಿದ್ದಾರೆ. ಈ ಮೌಡ್ಯ ಆಚರಿಸುವವರೆಲ್ಲಾ ವಿದ್ಯಾವಂತರೇ ಎನ್ನುವುದು ಬೇಸರದ ಸಂಗತಿ. ಆದ್ದರಿಂದ ವೈಚಾರಿಕತೆ ಇರುವ ವೈಜ್ಞಾನಿಕ ಶಿಕ್ಷಣ ಪದ್ಧತಿ ಅಗತ್ಯ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದ್ದೇವೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದರು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.

ಆಂದೋಲನ ಡೆಸ್ಕ್

Recent Posts

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

17 mins ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

49 mins ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

1 hour ago

ಬಿರುಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ತೆಂಗಿನ ಮರಗಳು.

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…

1 hour ago

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

4 hours ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

13 hours ago