ರಾಜ್ಯ

ವಿದ್ಯಾವಂತರು ಮಾನವೀಯತೆಯ ಗುಣ ರೂಢಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ

ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು: ಸಿಎಂ

ಬೆಂಗಳೂರು: ಅಸಮಾನತೆಯನ್ನು ಹೋಗಲಾಡಿಸಿ , ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾ ಸಂಕಿರ್ಣ ದಲ್ಲಿ ಆಯೋಜಿಸಲಾಗಿದ್ದ ನೂತನ ಒಳಾಂಗಣ ಕ್ರೀಡಾ ಸಂಕೀರ್ಣ ಹಾಗೂ ಮೊದಲನೇಯ ವರ್ಷದ ಬಿ. ಇ. ತರಗತಿಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ರವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ರವರ ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದರು.

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆಯಿದೆ

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ , ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮಾನ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಗೆ ಒತ್ತು

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾ II ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ , ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು. ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ,ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

9 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

10 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

10 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

10 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

10 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

14 hours ago