ರಾಜ್ಯ

ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ | ವಿಚಾರಣೆ ಬುಧವಾರಕ್ಕೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಾಜ್ಯದಾದ್ಯಂತ ನಡೆಸುತ್ತಿರುವ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆಗೆ ತಡೆಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

ಸಮೀಕ್ಷೆಗಾಗಿ ಆಗಸ್ಟ್ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ ಎನ್ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಪಿಐಎಲ್‍ಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವು ರೂಪಿಸುವ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ. ಜನರು ಸಮೀಕ್ಷೆಯಲ್ಲಿ ಭಾಗಿಯಾಗುವುದು ಸ್ವಯಂಪ್ರೇರಿತ ಪ್ರಕ್ರಿಯೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ತಿಳಿಸಿತು.

ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅರ್ಜಿದಾರರು ಜಾತಿ ಸಮೀಕ್ಷೆ ಎಂದು ವ್ಯಾಖ್ಯಾನಿಸುತ್ತಿದ್ದಾರೆ” ಎಂದು ಆಕ್ಷೇಪಿಸಿದರು. ಆಗ ಪೀಠವು ಪ್ರತಿಯೊಬ್ಬ ನಿವಾಸಿಯನ್ನು ಪತ್ತೆ ಮಾಡಿ, ಅವರ ಜಾತಿಯನ್ನು ಗುರುತಿಸಲಾಗುತ್ತಿದೆ ಎಂಬುದು ಅರ್ಜಿದಾರರ ವಾದವಾಗಿದೆ. ವ್ಯತ್ಯಾಸವೇನು ಎಂದು ಪ್ರಶ್ನಿಸಿತು.

ಅದಕ್ಕೆ ಸಿಂಘ್ವಿ ಅವರು ದತ್ತಾಂಶವಿಲ್ಲದೇ ಕಲ್ಯಾಣ ಕ್ರಮಗಳನ್ನು ರೂಪಿಸಲಾಗದು. ಇದು ನ್ಯಾಯಾಂಗ ಪರಿಶೀಲನೆಗೆ ಒಳಪಡುವುದಿಲ್ಲ. ವಿಶೇಷ ಪ್ರಕರಣಗಳಲ್ಲಿ ಮಾತ್ರ ನ್ಯಾಯಾಲಯ ಮಧ್ಯಂತರ ತಡೆ ನೀಡಬಹುದಾಗಿದೆ ಎಂದು ಮನವಿ ಮಾಡಿದರು.

ದತ್ತಾಂಶವಿಲ್ಲದೇ ತರ್ಕಬದ್ಧ ನೀತಿ ಅಥವಾ ತರ್ಕಬದ್ಧ ಸಲಹೆ ನೀಡುವುದು ಹೇಗೆ? ಅರ್ಜಿದಾರರು ಸರ್ಕಾರದ ತೀರ್ಮಾನ ಪ್ರಶ್ನಿಸಲು ಬಯಸುತ್ತಿಲ್ಲ. ಆದರೆ, ನಿರ್ಧಾರ ಕೈಗೊಳ್ಳಲು ಸಂಗ್ರಹಕ್ಕೆ ಮುಂದಾಗಿರುವ ದತ್ತಾಂಶ ಸಂಗ್ರಹ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದಾರೆ. ಸಂಪೂರ್ಣ ವಾದ ಆಲಿಸಿ ಇಡೀ ಕಾಯಿದೆ ಅಸಾಂವಿಧಾನಿಕ ಎಂದು ನ್ಯಾಯಾಲಯ ಹೇಳಬಹುದು. ಈ ಹಂತದಲ್ಲಿ ಮಧ್ಯಂತರ ತಡೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

ಹೆಚ್ಚಿನ ಓದಿಗಾಗಿ :- KRS | ಸೆ.26 ರಿಂದ 5 ದಿನಗಳ ಕಾಲ ಕಾವೇರಿ ಆರತಿ

ಈ ಹಂತದಲ್ಲಿ ಹಿಂದುಳಿದ ವರ್ಗಗಳ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು ಸಮೀಕ್ಷೆಯಲ್ಲಿ ದತ್ತಾಂಶ ನೀಡುವುದು ಸ್ವಯಂಪ್ರೇರಿತ ನಿರ್ಧಾರವಾಗಿದ್ದು, ಕಡ್ಡಾಯವಾಗಿ ಮಾಹಿತಿ ನೀಡಲೇಬೇಕಾದ ಗಣತಿ ಕಾಯಿದೆಗೆ ವಿರುದ್ಧ ಎಂದರು.

ಇದಕ್ಕೂ ಮುನ್ನ, ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ಸಮೀಕ್ಷೆಗಾಗಿ ಸರ್ಕಾರ ಮತ್ತು ಆಯೋಗ ನೀಡಿರುವ ಹ್ಯಾಂಡ್‌ಬುಕ್‌ನಲ್ಲಿ ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸಂವಿಧಾನದ 342ನೇ ವಿಧಿಯಡಿ ನಿರ್ಬಂಧ ಇರುವುದರಿಂದ ಸಮೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕಾನೂನಿನ ಅಡಿ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಉದ್ದೇಶಕ್ಕಾಗಿ ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ, ನಿರ್ವಹಿಸಬಹುದು. ಆದರೆ, ಇದು ಕೇಂದ್ರ ಸರ್ಕಾರದ ಪಟ್ಟಿಗಿಂತ ವಿಭಿನ್ನ ಎಂದು ಆಕ್ಷೇಪಿಸಿದರು.

ಇನ್ನೊಬ್ಬ ಹಿರಿಯ ವಕೀಲ ಜಯಕುಮಾರ್‌ ಪಾಟೀಲ್‌ ಅವರು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕಾಯಿದೆ ಸೆಕ್ಷನ್‌ 9(1)(ii) ಅಡಿ ಸಮೀಕ್ಷೆ ನಡೆಸಲು ಯಾವುದೇ ವಿಧಾನವಿಲ್ಲ. ಈ ಕಾಯಿದೆ ತಿದ್ದುಪಡಿ ಮಾಡಿರುವುದು ಸಂವಿಧಾನದ 342ನೇ ವಿಧಿ ಸೂಪರ್‌ ಸೀಡ್‌ ಮಾಡಲಾಗದು. ಸಮೀಕ್ಷೆಯಲ್ಲಿ ಇಡೀ ರಾಜ್ಯದ ಜನತೆಯನ್ನು ಒಳಗೊಳ್ಳಲಾಗುತ್ತದೆ. ಇದು ಗಣತಿಯಲ್ಲದೇ ಬೇರೇನೂ ಅಲ್ಲ. ಇದು ಸಂವಿಧಾನದ 342Aನೇ ವಿಧಿಗೆ ವಿರುದ್ಧವಾಗಿದ್ದು, ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದು ಚುನಾವಣೆಗಾಗಿ ಪ್ರತಿ ಜಾತಿಯ ಸಂಖ್ಯೆಯನ್ನು ಪತ್ತೆ ಮಾಡುವ ಬಣ್ಣದ ತಂತ್ರವಾಗಿದೆ ಎಂದು ಹೇಳಿದರು.

ರಾಜ್ಯ ಒಕ್ಕಲಿಗರ ಸಂಘ ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಜಾತಿ ಗುರುತಿಸುವಿಕೆಯನ್ನು ಸ್ವೇಚ್ಛೆಯಿಂದ ಮಾಡಲಾಗುತ್ತಿದೆ. ಜಾತಿ ಗುರುತಿಸುವುದಕ್ಕೆ ಪೂರಕವಾಗಿ ಯಾವುದೇ ಅಧ್ಯಯನವನ್ನು ಸರ್ಕಾರ ಮಾಡಿಲ್ಲ. ಇದರಿಂದ ನಕಲಿ ಸಾಧ್ಯತೆ ಹೆಚ್ಚಾಗಲಿದ್ದು, ಜನರು ತಪ್ಪು ದತ್ತಾಂಶ ನೀಡುವ ಸಾಧ್ಯತೆ ಇದೆ. ಮಾಹಿತಿಯ ಖಾಸಗಿತನದ ಪ್ರಶ್ನೆಯೂ ಇಲ್ಲಿದ್ದು, ಡಿಜಿಟಲ್‌ ರೂಪದಲ್ಲಿ ದಾಖಲಿಸಿದ ದತ್ತಾಂಶ ಸೋರಿಕೆಯಾಗುವುದನ್ನು ಅಲ್ಲಗಳೆಯಲಾಗದು. ಸಮೀಕ್ಷೆಯಲ್ಲಿ ಎತ್ತಲಾಗಿರುವ ಪ್ರಶ್ನೆಗಳನ್ನು ನೋಡಿದರೆ ಅದು ವ್ಯಕ್ತಿಯೊಬ್ಬರ ವಿವರವಲ್ಲದೇ ಬೇರೇನೂ ಅಲ್ಲ. ಇಂಥ ಸಮೀಕ್ಷೆಗೆ ಅವಕಾಶವಿಲ್ಲ” ಎಂದರು.

ಮಾಜಿ ಶಾಸಕ ಕೆ ಎನ್‌ ಸುಬ್ಬಾರೆಡ್ಡಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ವಿವೇಕ್‌ ರೆಡ್ಡಿ ಅವರು “ಹಲವು ಜಾತಿಗಳನ್ನು ಧರ್ಮದೊಂದಿಗೆ ತಳುಕು ಹಾಕಲಾಗಿದೆ. ಹೊಸ ಪಟ್ಟಿಯಲ್ಲಿ ಅವೈಜ್ಞಾನಿಕ ಗುಂಪು ಸೃಷ್ಟಿಸಲಾಗಿದ್ದು, ಪ್ರಮುಖ ಜಾತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಆಯೋಗವು ತನ್ನ ವಿವೇಚನ ಬಳಸಿಲ್ಲ. ಕೃತಕವಾಗಿ ಜಾತಿಗಳನ್ನು ಸೃಷ್ಟಿ ಮಾಡಲಾಗಿದ್ದು, ವಿವೇಚನೆ ಬಳಕೆ ಮಾಡಲಾಗಿಲ್ಲ. ಇದು ಗೊಂದಲಕ್ಕೆ ನಾಂದಿಯಾಗಿದೆ. ಪ್ರಮುಖ ದತ್ತಾಂಶವನ್ನು ಅಸ್ತ್ರವಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ದತ್ತಾಂಶ ಗಣಿಗಾರಿಕೆ ಮಾಡುವುದು ಸರ್ಕಾರ ಉದ್ದೇಶವಾಗಿದೆ” ಎಂದು ಆರೋಪಿಸಿದರು.

ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಶ್ರೀರಂಗ ಸುಬ್ಬಣ್ಣ ಅವರು ಸಮೀಕ್ಷೆ ನಡೆಸಲು ಅತ್ಯಂತ ಅವಸರ ಪಡಲಾಗುತ್ತಿದ್ದು, ಕೆಲವು ವಿಚಾರಗಳು ನಿರ್ಧಾರವಾಗುವವರೆಗೆ ಸರ್ಕಾರ ಮತ್ತು ಆಯೋಗಕ್ಕೆ ಸಮೀಕ್ಷೆ ಮುಂದುವರಿಸುವಂತೆ ನಿರ್ದೇಶಿಸುವುದು ಅಗತ್ಯವಾಗಿದೆ ಎಂದರು. ಎಲ್ಲ ವಾದ ಆಲಿಸಿದ ಪೀಠವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

32 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

44 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago