Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಚಾರಣಿಗರ ರಕ್ಷಣೆಗೆ ಶಕ್ತಿ ಮೀರಿ ಪ್ರಯತ್ನ: ಸಿದ್ದರಾಮಯ್ಯ

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಒಂಬತ್ತು ಚಾರಣಿಗರು ಸಾವನ್ನಪ್ಪಿದ್ದು, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಉಳಿದ ಚಾರಣಿಗರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೃತರಿಗೆ ಸಂತಾಪ ಸೂಚಿಸಿ, ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

ಮೃತರ ಸಂಖ್ಯೆ 9 ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎಂದು ಘಟನಾ ಸ್ಥಳದಲ್ಲಿರುವ ಸಚಿವ ಕೃಷ್ಣಬೈರೇಗೌಡರಿಗೆ ಸೂಚನೆ ನೀಡಿದ್ದೇನೆ.

ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ತಮ್ಮ ಗುಡಿಗೆ ಸೇರಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!