ರಾಜ್ಯ

ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡಿಸಲು ಪ್ರಯತ್ನಗಳು ನಡೆದಿವೆ: ಪರಮೇಶ್ವರ್‌

ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿಯನ್ನು ಬೆಳಗಾವಿಯ ಅಧಿವೇಶನದಲ್ಲಿ ಮಂಡಿಸಲು ಪ್ರಯತ್ನಗಳು ನಡೆದಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‍ನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಘಟಕದಿಂದ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಿ ಹತ್ತು ಘೋಷಣೆಗಳನ್ನು ಮಾಡಲಾಯಿತು.

ಚಿತ್ರದುರ್ಗದ ಘೋಷಣೆಯ ಪ್ರಕಾರ ಕಾಂಗ್ರೆಸ್ ಸರ್ಕಾರ ಅಕಾರಕ್ಕೆ ಬಂದ ಬಳಿಕ ಮೊದಲ ಅವೇಶನದಲ್ಲೇ ಸದಾಶಿವ ಆಯೋಗದ ವರದಿಯನ್ನು ಮಂಡಿಸುವುದಾಗಿ ಭರವಸೆ ನೀಡಲಾಗಿತ್ತು. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಮೊದಲ ಅಧಿವೇಶನದಲ್ಲಿ ವರದಿ ಮಂಡಿಸಲಾಗಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ 2ನೇ ಅವೇಶನದಲ್ಲಿ ಮಂಡನೆ ಮಾಡಲು ಒತ್ತಡ ಹೇರುತ್ತಿದ್ದೇವೆ ಎಂದರು.

ಸಚಿವರಾದ ಕೆ.ಎಚ್.ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ತಾವು ಮುಖ್ಯಮಂತ್ರಿಯರ ಜೊತೆ ಚರ್ಚೆ ನಡೆಸಿದ್ದು, ವರದಿ ಮಂಡನೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ. ಇತರ ಸಮುದಾಯಗಳ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ವರದಿ ಮಂಡನೆಯಾಗಬೇಕು, ಚರ್ಚೆಯಾಗಬೇಕು ಎಂಬುದು ಎಲ್ಲರ ಒತ್ತಾಸೆ. ಆದರೆ ಅದಕ್ಕೂ ಮುನ್ನ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿಯವರು, ಶಾಸಕರು, ಸಚಿವರು, ಮುಖಂಡರ ಜೊತೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿಸಿದರು

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago