ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ
ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಕಾರ್ಕಳದಲ್ಲಿಂದು ವಲಯ ಅರಣ್ಯಾಧಿಕಾರಿಗಳ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರ ನೂತನ ಕಟ್ಟಡ ಉದ್ಘಾಟಿಸಿ, ಅರಣ್ಯ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಡೀಮ್ಡ್ ಅರಣ್ಯ ಸಮಸ್ಯೆ ಪರಿಹರಿಸಲು ಕೊನೆಯ ಅವಕಾಶ ದೊರೆತಿದ್ದು, ಸರ್ವೋನ್ನತ ನ್ಯಾಯಾಲಯಕ್ಕೆ ಮರು ಮನವಿ ಸಲ್ಲಿಸುವ ಸಲುವಾಗಿ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದರು.
ಮೊದಲಿಗೆ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದಾಗ 9 ಲಕ್ಷ ಹೆಕ್ಟೇರ್ ಜಮೀನನ್ನು ಡೀಮ್ಡ್ ಎಂದು ಗುರುತಿಸಲಾಗಿತ್ತು, ನಂತರ 2022ರಲ್ಲಿ ಪ್ರಮಾಣಪತ್ರ ಸಲ್ಲಿಸಿದಾಗ 3 ಲಕ್ಷ 33 ಸಾವಿರ ಹೆಕ್ಟೇರ್ ಜಮೀನು ಎಂದು ಪರಿಷ್ಕರಿಸಲಾಯಿತು. ಆಗ ಸಮರ್ಪಕವಾಗಿ ಸರ್ವೆ ನಡೆಸದೆ, ಖುದ್ದು ಪರಿಶೀಲಿಸದ ಕಾರಣ ಸರ್ಕಾರಿ ಕಟ್ಟಡ, ಶಾಲೆ, ಆಸ್ಪತ್ರೆ, ಪಟ್ಟಾ ಭೂಮಿ ಸೇರಿದೆ. ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದು, ಈ ಲೋಪ ಸರಿಪಡಿಸಬೇಕಾಗಿದೆ ಎಂದರು.
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ದಂಡ ಮತ್ತು ಇತರ ಶುಲ್ಕವನ್ನು ಪಾವತಿಸಬೇಕಾಗಿದೆ. ಪ್ರಸ್ತುತ ಹೈಕೋರ್ಟ್ ಈ ಸಂಬಂಧ ನಿರ್ದೇಶನ ನೀಡಿದ್ದು, ನ್ಯಾಯಾಲಯದ ಆದೇಶದಂತೆ ಸರ್ಕಾರ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಇದಕ್ಕೂ ಮುನ್ನ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತೆರಳಿದ ಈಶ್ವರ ಖಂಡ್ರೆ ದೇವರ ದರ್ಶನ ಪಡೆದು, ರಾಜ್ಯದಲ್ಲಿ ಉತ್ತಮ, ಮಳೆ, ಬೆಳೆ, ಆಗಲಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್, ಕಮಲಾ ಕರಿಕಳನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…