ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಈ ಕುರಿತು ಇಂದು(ಡಿ.3) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವೂ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ ಮತ್ತು ನಳೀನ್ ಕುಮಾರ್ ಕಟೀಲ್ ವಿರುದ್ಧ ಎಫ್‌ಐಆರ್‌ಅನ್ನು ರದ್ದುಗೊಳಿಸುವಂತೆ ಆದೇಶ ಹೊರಡಿಸಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಆದರ್ಶ್ ಅಯ್ಯರ್ ಎಂಬುವವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇನ್ನಿತರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಎಫ್‌ಐಆರ್ ರದ್ದು ಮಾಡುವಂತೆ ನಿರ್ಮಲಾ ಸೀತಾರಾಮನ್ ಹಾಗೂ ನಳೀನ್ ಕುಮಾರ್ ಕಟೀಲು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದತಿ ಕೋರಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಆದೇಶಿಸಿದೆ.