ರಾಜ್ಯ

ಚುನಾವಣಾ ಬಾಂಡ್‌ ಅಕ್ರಮ: ನಿರ್ಮಲಾ ಸೀತಾರಾಮನ್‌, ನಳೀನ್‌ ಕುಮಾರ್‌ ಕಟೀಲ್‌ಗೆ ಬಿಗ್‌ ರಿಲೀಫ್‌

ಬೆಂಗಳೂರು: ಚುನಾವಣಾ ಬಾಂಡ್‌ ಹೆಸರಿನ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

ಈ ಕುರಿತು ಇಂದು(ಡಿ.3) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವೂ ನಿರ್ಮಲಾ ಸೀತಾರಾಮನ್‌, ಜೆ.ಪಿ.ನಡ್ಡಾ ಮತ್ತು ನಳೀನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌ಅನ್ನು ರದ್ದುಗೊಳಿಸುವಂತೆ ಆದೇಶ ಹೊರಡಿಸಿದೆ.

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಆದರ್ಶ್ ಅಯ್ಯರ್ ಎಂಬುವವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇನ್ನಿತರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಎಫ್‌ಐಆರ್‌ ರದ್ದು ಮಾಡುವಂತೆ ನಿರ್ಮಲಾ ಸೀತಾರಾಮನ್‌ ಹಾಗೂ ನಳೀನ್‌ ಕುಮಾರ್‌ ಕಟೀಲು ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ರದ್ದತಿ ಕೋರಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸುವಂತೆ ಆದೇಶಿಸಿದೆ.

ಅರ್ಚನ ಎಸ್‌ ಎಸ್

Recent Posts

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

50 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

6 hours ago