ಬೆಂಗಳೂರು: ಚುನಾವಣಾ ಬಾಂಡ್ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ಈ ಕುರಿತು ಇಂದು(ಡಿಸೆಂಬರ್.17) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಆದೇಶ ಹೊರಡಿಸಿದೆ.
ಆದರ್ಶ್ ಅಯ್ಯರ್ ಎಂಬುವವರು ಬಿ.ವೈ.ವಿಜಯೇಂದ್ರ ವಿರುದ್ಧ ಚುನಾವಣಾ ಬಾಂಡ್ ದುರ್ಬಳಕೆ ಮಾಡಿ ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಎಫ್‌ಐಆರ್ ದಾಖಲಾಸಲಾಗಿತ್ತು. ಈ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಬಿ.ವೈ.ವಿಜಯೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಹಿಂದೆ ಚುನಾವಣಾ ಬಾಂಡ್ ದುರ್ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು.