Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮತಗಳ್ಳತನ ಆರೋಪಕ್ಕೆ ಚನಾವಣಾ ಆಯೋಗ ತಿರುಗೇಟು

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ಮುಖ್ಯ ಚುನಾವಣಾ ಅಧಿಕಾರಿಗಳು ಆಧಾರರಹಿತ ಮತ್ತು ಬೇಜವಾಬ್ದಾರಿಯುತ ಎಂದು ತಿರುಗೇಟು ನೀಡಿದೆ.

ಆರೋಪ ಮಾಡಿದ ಬೆನ್ನಲ್ಲೇ, ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಪತ್ರ ಬರೆದಿದ್ದು, ಮತಗಳ್ಳತನ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಅಲ್ಲದೇ ಪ್ರಮಾಣ ಪತ್ರದ ಕಾಪಿಯನ್ನು ಸಹ ರಾಹಲ್​​ ಗೆ ಕಳುಹಿಸಿದ್ದಾರೆ.

ಮತದಾರರ ಪಟ್ಟಿ ಪಾರದರ್ಶಕವಾಗಿ ನಡೆಯುತ್ತೆಂದು ತಮಗೆ ಅರಿವಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕರಿಗೆ ಮತದಾರರ ಪಟ್ಟಿ ನೀಡಲಾಗಿದೆ. 2024ರ ನವೆಂಬರ್ ಮತದಾರರ ಕರಡು ಪ್ರತಿಯನ್ನು ನೀಡಲಾಗಿದೆ. 2025ರ ಜನವರಿಯಲ್ಲಿ ಅಂತಿಮ ಮತದಾರರ ಪಟ್ಟಿ ನೀಡಲಾಗಿದೆ. ಅಂತಿಮ ಮತದಾರರ ಪಟ್ಟಿ ಕೊಟ್ಟ ಮೇಲೆ ಕಾಂಗ್ರೆಸ್ ನಾಯಕರಿಂದ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ. ಚುನಾವಣಾಧಿಕಾರಿ ಮುಂದೆ 2ನೇ ಹಂತದ ಆಕ್ಷೇಪಣೆ ಸಲ್ಲಿಸಿಲ್ಲ. ಇಷ್ಟೆಲ್ಲಾ ಗೊತ್ತಿದ್ದರೂ ಇಂದು ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಬಗ್ಗೆ ಆಕ್ಷೇಪಣೆ ಎತ್ತಿದ್ದೀರಿ ಎಂದು ರಾಹುಲ್​​ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಚುನಾವಣೆ ಬಗ್ಗೆ ಆಕ್ಷೇಪಣೆಗಳಿದ್ದರೆ ಹೈಕೋರ್ಟ್​ ನಲ್ಲಿ ಅರ್ಜಿ ಸಲ್ಲಿಸಬೇಕು. ರಿಜಿಸ್ಟ್ರೇಷನ್ ಆಫ್ ಎಲೆಕ್ಟೋರ್ಸ್ ರೂಲ್ಸ್ 1960ರ 20(3)(b) ಪ್ರಕಾರ ಒಂದು ಪ್ರಮಾಣಪತ್ರಕ್ಕೆ ಸಹಿ ಮಾಡಿ ಕಳುಹಿಸಿದರೆ ಮುಂದಿನ ಕ್ರಮ ಕೈಗೊಳ್ಳಲು ಸಹಾಯವಾಗಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರು ಪತ್ರದ ಮೂಲಕ ರಾಹುಲ್ ಗಾಂಧಿ ಆರೋಪಕ್ಕೆ ಟಾಂಗ್​​ ಕೊಟ್ಟಿದ್ದಾರೆ.

ಆಗಸ್ಟ್ 8, 2025ರಂದು ಕಾಂಗ್ರೆಸ್ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗವು 2024ರ ನವೆಂಬರ್ ಮತ್ತು 2025ರ ಜನವರಿಯಲ್ಲಿ ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಹಂಚಿಕೊಂಡಿದೆ ಎಂದು ಸಿಇಒ ತಿಳಿಸಿದ್ದಾರೆ.

ಆದರೆ, ಈ ಪಟ್ಟಿಯ ಪ್ರಕಟಣೆಯ ನಂತರ ಕಾಂಗ್ರೆಸ್ ಪಕ್ಷದಿಂದ ಯಾವುದೇ ಅಧಿಕೃತ ಮನವಿಯನ್ನು ಸಲ್ಲಿಸಲಾಗಿಲ್ಲ ಎಂದು ಆಯೋಗ ಆರೋಪಿಸಿದೆ. ನೀವು ಸಲ್ಲಿಸುವ ಪ್ರಮಾಣ ಪತ್ರದಲ್ಲಿ ಅಕ್ರಮವಾಗಿ ಸೇರಿಸಲಾಗಿರುವ ಅಥವಾ ಅಳಿಸಲಾಗಿರುವ ಮತದಾರರ ಹೆಸರು, ಚುನಾವಣಾ ಐಡಿ ನಂಬರ್ ಮತ್ತು ಮತದಾರರ ಪಟ್ಟಿಯ ಸೀರಿಯಲ್ ನಂಬರ್‌ನಂತಹ ವಿವರಗಳನ್ನು ಒಳಗೊಂಡಿರಬೇಕು. ಈ ಮಾಹಿತಿಯನ್ನು ಒದಗಿಸಿದರೆ ಮಾತ್ರ ಮುಂದಿನ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದರ ಜೊತೆಗೆ, ತಪ್ಪು ಅಥವಾ ಆಧಾರರಹಿತ ಮಾಹಿತಿಯನ್ನು ಒದಗಿಸಿದರೆ, ಸೆಕ್ಷನ್ 31 ಆರ್‌ಪಿ ಆಕ್ಟ್ 1950 ಮತ್ತು ಸೆಕ್ಷನ್ 227 ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಯಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳುವಂತೆ, ಕರ್ನಾಟಕದ ಒಂದು ಕ್ಷೇತ್ರದಲ್ಲಿ 1,00,250 ಮತಗಳ “ವೋಟ್ ಚೋರಿ” ಆಗಿದೆ, ಒಂದು ವಿಧಾನಸಭಾ ಕ್ಷೇತ್ರದಲ್ಲಿ 11,965 ನಕಲಿ ಮತದಾರರಿದ್ದಾರೆ. ಮಹದೇವಪುರದಲ್ಲಿ ನಕಲಿ ವಿಳಾಸಗಳನ್ನು ಹೊಂದಿರುವ ‘40,009’ಮತದಾರರಿದ್ದಾರೆ. ‘ಮನೆ ಸಂಖ್ಯೆ 0’ ಎಂಬ ಅಡ್ರೆಸ್ ಇರುವ ಹಲವರು ನೋಂದಾಯಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ, 46 ಮತದಾರರು ಒಂದೇ ರೂಮಿನ ವಿಳಾಸದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಗುರುವಾರ ಸಂಜೆಯೊಳಗೆ ರಾಹುಲ್ ಗಾಂಧಿಯವರು ಸಹಿ ಮಾಡಿದ ದಾಖಲೆಗಳನ್ನು ಸಲ್ಲಿಸುತ್ತಾರೆ ಎಂದು ನಿರೀಕ್ಷಿಸುತ್ತಿರುವುದಾಗಿ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ಆಯೋಗವು ರಾಹುಲ್ ಗಾಂಧಿಯವರ ಆರೋಪಗಳನ್ನು ” ಜೂನ್ 12, 2025ರಂದು ಆಯೋಗವು ರಾಹುಲ್ ಗಾಂಧಿಯವರಿಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ “ರಿಗ್ಗಿಂಗ್” ಆರೋಪದ ಕುರಿತು ಚರ್ಚಿಸಲು ಆಹ್ವಾನವನ್ನು ನೀಡಿತ್ತು, ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ. “ಅವರ ಮಾಧ್ಯಮ ಹೇಳಿಕೆಗಳು ಆಧಾರರಹಿತವೇ?” ಎಂದು ಆಯೋಗವು ಪ್ರಶ್ನಿಸಿದೆ.

Tags:
error: Content is protected !!