ಬೆಂಗಳೂರು: ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಶಂಕರ್ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದ್ದು, ಸಿದ್ದು ಶಾಸಕ ಸ್ಥಾನ ಗಟ್ಟಿಮುಟ್ಟಾಗಿದೆ.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123ರ ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ.
ಇದನ್ನೂ ಓದಿ:- ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ
ಸೆಕ್ಷನ್ 123(4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದು ಅಪರಾಧ. ಹಾಗಾಗಿ ಅಕ್ರಮ ಎಸಗುವ ಮೂಲಕ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ್ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.





