ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನಂಜೇಗೌಡ ಆಯ್ಕೆ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ಮಂಜುನಾತಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಮತಎಣಿಕೆಯಲ್ಲಿ ಲೋಪವಾಗಿದ್ದು, ಮತ್ತೊಮ್ಮೆ ಮರು ಮತಎಣಿಕೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಇಂದು ತೀರ್ಪು ನೀಡಿದೆ.
ಇದನ್ನು ಓದಿ : ತಲಾ ಆದಾಯದಲ್ಲೂ ಕರ್ನಾಟಕ ದೇಶದಲ್ಲಿ ನಂ.1 ಸ್ಥಾನದಲ್ಲಿದೆ: ಸಚಿವ ಸಂತೋಷ್ ಲಾಡ್
ಹೊಸದಾಗಿ ಮರು ಮತ ಎಣಿಕೆ ನಡೆಸಲು ಹೈಕೋರ್ಟ್ ಆದೇಶ ನೀಡಿದ್ದು, ನಾಲ್ಕು ವಾರಗಳ್ಲಲಿ ಮರು ಮತ ಎಣಿಕೆ ಮಾಡುವಂತೆ ಸೂಚನೆ ನೀಡಿದೆ. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ. ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಈಗಿನ ಹಾಲಿ ಶಾಸಕ ನಂಜೇಗೌಡ 248 ಮತಗಳ ಅಂತರದಿಂದ ಗೆದ್ದಿದ್ದರು. ಈ ಬಗ್ಗೆ ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡ ಹೈಕೋರ್ಟ್ ಮೊರೆ ಹೋಗಿದ್ದರು. ಮತ ಎಣಿಕೆಯಲ್ಲಿ ಲೋಪವಾಗಿದ್ದು, ಮರು ಮತ ಎಣಿಕೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು.





