ಮೈಸೂರು: ಇದೇ ಏಫ್ರಿಲ್ 19ರಿಂದ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅತ್ಯಂತ ಕಠಿಣ ಕ್ರಮಗಳನ್ನು ರೂಪಿಸಿದೆ. ಹಣ, ಮಾದಕ ವಸ್ತು, ಆಮಿಷಗಳನ್ನು ತಡೆಯಲು ಹಲವಾರು ಕಾರ್ಯಪಡೆಗಳನ್ನು ನಿಯೋಜಿಸಿದ್ದು, ನಿನ್ನೆಯಿಂದಲೇ (ಮಾ.೧೬) ಚುನಾವಣಾ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಯಾಗಿದೆ.
ಇಂದು (ಮಾ.೧೭) ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಬಿಡದಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.
ವಾಹನಗಳನ್ನು ನಿಲ್ಲಿಸಿ ಓರಲ್ ಚೆಕ್ಕಿಂಗ್, ವಾಹನದ ಡಿಕ್ಕಿ ತೆಗೆಸಿ ತಪಾಸಣೆ ಮಾಡಲಾಗುತ್ತಿದೆ. ಆ ಮೂಲಕ ಚುನಾವಣಾ ಅಕ್ರಮ ನಡೆಯದಂತೆ ಪೊಲೀಸರು ಹದ್ದಿನ ಕಣ್ಗಾವಲು ಇರಿಸಿದ್ದಾರೆ.
ಕಂದಾಯ ಅಧಿಕಾರಿಗಳ ಗೈರಿನಲ್ಲಿಯೂ ಸಹಾ ಪೊಲೀಸರಿಂದ ಚೆಕಿಂಗ್ ಕಾರ್ಯ ನಡೆಯುತ್ತಿದೆ. ಹೆಜ್ಜಾಲ ಚೆಕ್‌ಪೋಸ್ಟ್ ಬೆಂಗಳೂರು-ಮೈಸೂರು ಹೆದ್ದಾರಿಯ ಅತಿದೊಡ್ಡ ಚೇಕಿಂಗ್ ಪಾಯಿಂಟ್ ಆಗಿದೆ.
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…