ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಎಸ್.ಸಿ, ಎಸ್.ಟಿ ಪ್ರಮುಖ ನಾಯಕರ ಸಭೆ ನಡೆಸಲಾಯಿತು. ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಿತು.
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ ರಾಜೇಶ್, ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಸಂಸದ ಉಮೇಶ್ ಜಾಧವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್‍ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹಣುಮಂತು, ಎಸ್ಸಿ ಮೋರ್ಚಾ ಅಧ್ಯಕ್ಷ ಸಿಮೆಂಟ್ ಮಂಜು ಹಾಗೂ ಆಹ್ವಾನಿತ ಪ್ರಮುಖರು ಉಪಸ್ಥಿತರಿದ್ದರು





