Mysore
20
overcast clouds
Light
Dark

ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಶಾಕ್‌ ಕೊಟ್ಟಿದೆ.

ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್​.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿ, ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ್​ ಮತ್ತು ತಾಲೂಕು ಪಂಚಾಯತ್​ ಚುನಾವಣೆಗೆ ಮೀಸಲಾತಿ ಅಂತಿಮಗೊಳಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಬಳಿಕ ಸರ್ಕಾರದ ಪರ ವಾದ ಮಂಡಿಸಿದ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಈಗಾಗಿ ಮುಖ್ಯ ನ್ಯಾಯಮೂರ್ತಿ ಎನ್​.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ.