ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಶಾಕ್ ಕೊಟ್ಟಿದೆ.
ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿ, ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಮೀಸಲಾತಿ ಅಂತಿಮಗೊಳಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಬಳಿಕ ಸರ್ಕಾರದ ಪರ ವಾದ ಮಂಡಿಸಿದ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಈಗಾಗಿ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…