ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು.
ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಿದೆ. ಅವಧಿ ಮುಗಿದು 1 ತಿಂಗಳು ಮಾತ್ರ ಆಗಿದೆ. ಈಗಾಗಲೇ ಫೈಲ್ ರೆಡಿ ಮಾಡಲಾಗಿದೆ. ಮೀಸಲಾತಿ ಹಾಗೂ ಡಿಲಿಮಿಟೇಷನ್ ಕೆಲಸ ನಡೆಯುತ್ತಿದೆ. ಹೀಗಾಗಿ ನಮಗೆ ಸಮಯ ಬೇಕು. ಕೆಲವು ಸ್ಥಳೀಯ ಸಂಸ್ಥೆಗಳು ಅಪ್‌ಗ್ರೇಡ್ ಆಗಿದೆ. ಹೀಗಾಗಿ ತಡವಾಗುತ್ತಿದೆ ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ಇಚ್ಛೆ ನಮ್ಮ ಸರ್ಕಾರಕ್ಕೆ ಇದೆ. ಆದಷ್ಟು ಬೇಗ ಚುನಾವಣೆ ಮಾಡುತ್ತೇವೆ. ಹಿಂದೆ ಬಿಜೆಪಿ ಅವಧಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ಆಗಿರಲಿಲ್ಲ. ಅದನ್ನು ಮಾಡಿದ್ದು ನಮ್ಮ ಸರ್ಕಾರ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.





