ರಾಜ್ಯ

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು.

ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಿದೆ. ಅವಧಿ ಮುಗಿದು 1 ತಿಂಗಳು ಮಾತ್ರ ಆಗಿದೆ. ಈಗಾಗಲೇ ಫೈಲ್‌ ರೆಡಿ ಮಾಡಲಾಗಿದೆ. ಮೀಸಲಾತಿ ಹಾಗೂ ಡಿಲಿಮಿಟೇಷನ್‌ ಕೆಲಸ ನಡೆಯುತ್ತಿದೆ. ಹೀಗಾಗಿ ನಮಗೆ ಸಮಯ ಬೇಕು. ಕೆಲವು ಸ್ಥಳೀಯ ಸಂಸ್ಥೆಗಳು ಅಪ್‌ಗ್ರೇಡ್‌ ಆಗಿದೆ. ಹೀಗಾಗಿ ತಡವಾಗುತ್ತಿದೆ ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ಇಚ್ಛೆ ನಮ್ಮ ಸರ್ಕಾರಕ್ಕೆ ಇದೆ. ಆದಷ್ಟು ಬೇಗ ಚುನಾವಣೆ ಮಾಡುತ್ತೇವೆ. ಹಿಂದೆ ಬಿಜೆಪಿ ಅವಧಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ಆಗಿರಲಿಲ್ಲ. ಅದನ್ನು ಮಾಡಿದ್ದು ನಮ್ಮ ಸರ್ಕಾರ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago