ರಾಜ್ಯ

ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರುಗಳಿಗೆ ಚಿತ್ರಹಿಂಸೆ; ವಿದ್ಯುತ್ ಶಾಕ್ ನೀಡಿ ವಿಕೃತಿ

ವಿಜಯಪುರ: ಕಾರ ಹುಣ್ಣಿಮೆ ನೆಪದಲ್ಲಿ ಎತ್ತುಗಳು ಹಾಗೂ ಕುದುರೆಗಳಿಗೆ ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದ ಮೈದಾನದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತು ಹಾಗೂ ಕುದುರೆಗಳ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಎತ್ತುಗಳು ಹಾಗೂ ಕುದುರೆಗಳು ಜೋರಾಗಿ ಓಡಲಿ ಎಂಬ ಕಾರಣಕ್ಕೆ ಅವುಗಳಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂದು ರೈತರು ಆರೋಪಿಸಿದ್ದಾರೆ.

ಸ್ಪರ್ಧೆ ಆಯೋಜನೆಗೂ ಮೊದಲೇ ರೈತರು ಎತ್ತುಗಳಿಗೆ ಕರೆಂಟ್ ಶಾಕ್ ಕೊಡುವುದು ಬೇಡ ಎಂದಿದ್ದರು. ಇದರ ಜೊತೆಗೆ ಪೊಲೀಸರು ಕೂಡ ಈ ವಿದ್ಯುತ್ ಶಾಕ್ ನೀಡಬೇಡಿ ಎಂದು ಆಯೋಜಕರಿಗೆ ಎಚ್ಚರಿಕೆ ನೀಡಿದ್ದರು.

ಯಾವುದಕ್ಕೂ ಕ್ಯಾರೆ ಎನ್ನದ ಸ್ಪರ್ಧೆ ಆಯೋಜಕರು ಏನೂ ಗೊತ್ತಿಲ್ಲದ ಮೂಕ ಪ್ರಾಣಿಗಳಿಗೆ ಕರೆಂಟ್ ಶಾಕ್ ನೀಡುವುದರ ಜೊತೆಗೆ ಬಾರುಕೋಲು ಹಾಗೂ ದೊಡ್ಡ ದೊಡ್ಡ ಬಡಿಗೆಗಳಿಂದ ಬಾರಿಸಿ ಚಿತ್ರಹಿಂಸೆ ನೀಡಿದ್ದಾರೆ.

ಕಾರ ಹುಣ್ಣಿಮೆ ಪ್ರಯುಕ್ತ ಮೂಕ ಪ್ರಾಣಿಗಳಿಗೆ ಈ ರೀತಿ ಚಿತ್ರಹಿಂಸೆ ನೀಡಿರುವುದು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಈ ಬಗ್ಗೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ರೀತಿಯ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸಬೇಕಿದೆ.

andolana

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

2 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

5 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

5 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

6 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

6 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

6 hours ago