ವಿಜಯಪುರ: ಕಾರ ಹುಣ್ಣಿಮೆ ನೆಪದಲ್ಲಿ ಎತ್ತುಗಳು ಹಾಗೂ ಕುದುರೆಗಳಿಗೆ ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದ ಮೈದಾನದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತು ಹಾಗೂ ಕುದುರೆಗಳ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಎತ್ತುಗಳು ಹಾಗೂ ಕುದುರೆಗಳು ಜೋರಾಗಿ ಓಡಲಿ ಎಂಬ ಕಾರಣಕ್ಕೆ ಅವುಗಳಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂದು ರೈತರು ಆರೋಪಿಸಿದ್ದಾರೆ.
ಸ್ಪರ್ಧೆ ಆಯೋಜನೆಗೂ ಮೊದಲೇ ರೈತರು ಎತ್ತುಗಳಿಗೆ ಕರೆಂಟ್ ಶಾಕ್ ಕೊಡುವುದು ಬೇಡ ಎಂದಿದ್ದರು. ಇದರ ಜೊತೆಗೆ ಪೊಲೀಸರು ಕೂಡ ಈ ವಿದ್ಯುತ್ ಶಾಕ್ ನೀಡಬೇಡಿ ಎಂದು ಆಯೋಜಕರಿಗೆ ಎಚ್ಚರಿಕೆ ನೀಡಿದ್ದರು.
ಯಾವುದಕ್ಕೂ ಕ್ಯಾರೆ ಎನ್ನದ ಸ್ಪರ್ಧೆ ಆಯೋಜಕರು ಏನೂ ಗೊತ್ತಿಲ್ಲದ ಮೂಕ ಪ್ರಾಣಿಗಳಿಗೆ ಕರೆಂಟ್ ಶಾಕ್ ನೀಡುವುದರ ಜೊತೆಗೆ ಬಾರುಕೋಲು ಹಾಗೂ ದೊಡ್ಡ ದೊಡ್ಡ ಬಡಿಗೆಗಳಿಂದ ಬಾರಿಸಿ ಚಿತ್ರಹಿಂಸೆ ನೀಡಿದ್ದಾರೆ.
ಕಾರ ಹುಣ್ಣಿಮೆ ಪ್ರಯುಕ್ತ ಮೂಕ ಪ್ರಾಣಿಗಳಿಗೆ ಈ ರೀತಿ ಚಿತ್ರಹಿಂಸೆ ನೀಡಿರುವುದು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಈ ಬಗ್ಗೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ರೀತಿಯ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸಬೇಕಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…