Mysuru | Installation of smart meters for electricity connection mandatory from July 1
ಬೆಂಗಳೂರು : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಮೀಟರ್ ರೀಡರ್‌ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್ ರೀಡಿಂಗ್‌ಅನ್ನು ಪ್ರೋಬ್‌ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್ ಬಿಲ್ ವಿತರಣೆಯ ದಿನಾಂಕವನ್ನು ಸೆ.15ನೇ ತಾರಿಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿತ್ತು.
ಇದನ್ನೂ ಓದಿ :-ಕಲ್ಯಾಣ ಕರ್ನಾಟಕ | ಭೂಗರ್ಭ ಜಲಮಟ್ಟ ಹೆಚ್ಚಿಸುವ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು
ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳುಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…