ರಾಜ್ಯ

18 ಸಾವಿರ ಮೆ.ವ್ಯಾ. ದಾಟಿದ ವಿದ್ಯುತ್ ಬೇಡಿಕೆ

  • ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ
  • ಬೇಡಿಕೆ ಈಡೇರಿಸಲು ವಿನಿಮಯ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ.

ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮತ್ತು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, “ಕಳೆದ ಫೆಬ್ರವರಿಯಲ್ಲಿ ವಿದ್ಯುತ್ ಬೇಡಿಕೆ ಗರಿಷ್ಠ ಬೇಡಿಕೆ ಅವಧಿಯಲ್ಲಿ 18,350 ಮೆಗಾ ವ್ಯಾಟ್ ತಲುಪಿದ್ದರೆ, ಮಾರ್ಚ್ ತಿಂಗಳಲ್ಲಿ 18,395 ಮೆಗಾ ವ್ಯಾಟ್ ಗೆ ಏರಿಕೆಯಾಗಿದೆ. ಮಾ. 7ರಂದು ಗರಿಷ್ಠ ವಿದ್ಯುತ್ ಬೇಡಿಕೆ 18,395 ಮೆಗಾ ವ್ಯಾಟ್ ತಲುಪಿತ್ತು”, ಎಂದು ಹೇಳಿದರು.

“ಕೋವಿಡ್ ಬಳಿಕ ವಿದ್ಯುತ್ ಬೇಡಿಕೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಗರಿಷ್ಠ ವಿದ್ಯುತ್ ಬೇಡಿಕೆ 2020-21ನೇ ಸಾಲಿನಲ್ಲಿ 14,367 ಮೆಗಾವ್ಯಾಟ್ ಇದ್ದರೆ, 2021-22ರಲ್ಲಿ 14,818 ಮೆ.ವ್ಯಾ., 2022-23ರಲ್ಲಿ 15,828 ಮ.ವ್ಯಾ. ಇದ್ದರೆ, 2023-24ರಲ್ಲಿ 17,220 ಮೆ.ವ್ಯಾ. ಇತ್ತು. ಈ ಬಾರಿ 18,385 ಮೆ.ವ್ಯಾ.ಗೆ ಏರಿಕೆಯಾಗಿದೆ. ಅದೇ ರೀತಿ ಪ್ರಸ್ತುತ ಗರಿಷ್ಠ ವಿದ್ಯುತ್ ಬಳಕೆ 357 ಮಿಲಿಯನ್ ಯೂನಿಟ್ ಇದೆ”, ಎಂದು ಮಾಹಿತಿ ನೀಡಿದರು.

“ಗರಿಷ್ಠ ಬೇಡಿಕೆ ಅವಧಿಯಲ್ಲಿ 2024ರ ಏಪ್ರಿಲ್ ತಿಂಗಳಲ್ಲಿ 16,985 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ವರ್ಷ 18,294 ಮೆ.ವ್ಯಾ. ತಲುಪುವ ಅಂದಾಜಿದೆ. ಅಂದರೆ ವಿದ್ಯುತ್ ಬೇಡಿಕೆಯಲ್ಲಿ ಶೇ. 8.1ರಷ್ಟು ಹೆಚ್ಚಳವಾಗಲಿದೆ. ಅದೇ ರೀತಿ 2024ರ ಮೇ ತಿಂಗಳಲ್ಲಿ 16,826 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ಬಾರಿ 17,122 ಮೆ.ವ್ಯಾ.ಗೆ ಏರಿಕೆಯಾಗುವ (ಶೇ. 1.8ರಷ್ಟು ಹೆಚ್ಚಳ) ಅದಾಜು ಮಾಡಲಾಗಿದೆ. ಅಲ್ಲದೆ, ವಿದ್ಯುತ್ ಬಳಕೆ ಪ್ರಮಾಣ ಏಪ್ರಿಲ್ ತಿಂಗಳಲ್ಲಿ 352 ಮಿಲಿಯನ್ ಯೂನಿಟ್ ಮತ್ತು ಮೇ ತಿಂಗಳಲ್ಲಿ 331 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ”, ಎಂದು ವಿವರಿಸಿದರು.

ಬೇಡಿಕೆ ಪೂರೈಸಲು ಸಿದ್ಧತೆ
“ರಾಜ್ಯದಲ್ಲಿ ಏರಿಕೆಯಾಗಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. 2024ರ ಡಿಸೆಂಬರ್ ನಿಂದ ಮೇ ತಿಂಗಳವರೆಗೆ ಬೇಡಿಕೆಗೆ ಅನುಗುಣವಾಗಿ ಉತ್ತರ ಪ್ರದೇಶದಿಂದ 100ರಿಂದ 1,400 (ಗರಿಷ್ಠ ಬೇಡಿಕೆ ಅವಧಿಯಲ್ಲಿ) ಮೆಗಾವ್ಯಾಟ್ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯಲಾಗುತ್ತಿದೆ. ಅದೇ ರೀತಿ ಜನವರಿಯಿಂದ ಏಪ್ರಿಲ್ ಅಂತ್ಯದವರೆಗೆ ಪಂಜಾಬ್ ನಿಂದ 200ರಿಂದ 531 ಮೆಗವ್ಯಾಟ್ ವಿದ್ಯುತ್ತನ್ನು ವಿನಿಮಯ ಆಧಾರದ ಮೇಲೆ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ”, ಎಂದರು.

“ಇದಲ್ಲದೆ, ಮಾ. 1ರಿಂದ 15ರವರೆಗೆ ಕೂಡಗಿಯಲ್ಲಿರುವ ಎನ್ ಟಿಪಿಸಿಯಿಂದ 310 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಪಡೆಯಲಾಗುತ್ತಿತ್ತು. ಮಾ. 15ರಿಂದ ಇನ್ನೂ ಹೆಚ್ಚುವರಿಯಾಗಿ 100 ಮೆ.ವ್ಯಾ. (ಒಟ್ಟು 410 ಮ.ವ್ಯಾ.) ವಿದ್ಯುತ್ ಪಡೆಯಲಾಗಿದೆ. ಜತೆಗೆ ಮಾರ್ಚ್ ತಿಂಗಳಿನಿಂದ ಮೇ ಅಂತ್ಯದವರೆಗೆ ಇಂಧನ ಸುರಕ್ಷತೆ ನೀತಿಯಡಿ ಇತರೆ ರಾಜ್ಯಗಳಿಂದ ಮಾಸಿಕ 1000 ಮೆ.ವ್ಯಾ. ವಿದ್ಯುತ್ ಪಡೆಯಲು ಪಿಸಿಕೆಎಲ್ ಒಪ್ಪಂದ ಮಾಡಿಕೊಂಡಿದೆ”, ಎಂದು ತಿಳಿಸಿದರು.

“ರೈತರಿಗೆ ದಿನದ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗಿದೆ. ಅನೇಕ ಕಡೆಗಳಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವಿದ್ಯುತ್ ಒದಗಿಸಲಾಗುತ್ತಿದೆ. ಕೆಲವೆಡೆ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆ ವಿದ್ಯುತ್ ಪೂರೈಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ (ತೋಟದ ಮನೆಗಳು ಸೇರಿ) ನೋಡಿಕೊಳ್ಳಲು ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ”, ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

23 mins ago

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…

40 mins ago

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

50 mins ago

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…

58 mins ago

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…

1 hour ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

3 hours ago