ರಾಜ್ಯ

ಬಿಲ್‌ನ 30 ದಿನಗಳ ಗಡುವು ಮೀರಿದಲ್ಲಿ ಗ್ರಾಹಕರ ವಿದ್ಯುತ‌ ಸಂಪರ್ಕ ಕಡಿತ: ಬೆಸ್ಕಾಂ

ಬೆಂಗಳೂರು: ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು.

ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ.

ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

ಗ್ರಾಹಕರಿಗೆ ವಿಶೇಷ ಸೂಚನೆ: ಆನ್‌ಲೈನ್ ಮೂಲಕ ವಿದ್ಯುತ್‌ ಬಿಲ್‌ ಪಾವತಿಸಿದ ಸಂದರ್ಭದಲ್ಲಿ ಕೆಲವೊಮ್ಮೆ ಬೆಸ್ಕಾಂ ಸಾಫ್ಟ್‌ವೇರ್‌ನಲ್ಲಿ ವಿವರ ನಮೂದಾಗದೇ ಇದ್ದಾಗ, ಬಾಕಿ ತೋರಿಸುವ ಸಾಧ್ಯತೆ ಇರುತ್ತದೆ. ಇಂಥ ಸಂದರ್ಭದಲ್ಲಿ ವಿದ್ಯುತ್‌ ಕಡಿತಕ್ಕೆ ಮುಂದಾದರೆ, ಸಿಬ್ಬಂದಿಗೆ ಬಿಲ್‌ ರಸೀದಿ ತೋರಿಸುವುದರಿಂದ ವಿದ್ಯುತ್‌ ಕಡಿತ ಮಾಡಲಾಗುವುದಿಲ್ಲ. ಹಾಗಾಗಿ, ನಮ್ಮ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

4 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

6 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

7 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

7 hours ago