ರಾಜ್ಯ

ಜುಲೈ ಅಂತ್ಯಕ್ಕೆ ಅರ್ಜುನ ಆನೆ ಸ್ಮಾರಕಕ್ಕೆ ಶಿಲಾನ್ಯಾಸ: ಈಶ್ವರ್‌ ಖಂಡ್ರೆ

ಬೆಂಗಳೂರು: 2023ರ ಡಿಸೆಂಬರ್‌ 4ರಂದು ಹಾಸನದಲ್ಲಿ ಕಾಡಾನೆಯೊಂದಿಗಿನ ಕಾದಾಟದಲ್ಲಿ ದಸರಾ ಆನೆ ಅರ್ಜುನ ಮಡಿದಿತ್ತು. ದಸರಾ ಆನೆ ಮಡಿದ ಜಾಗದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಇದೇ ಜುಲೈನಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ ಕಾಡಾನೆ ಸೆರೆಗೆ ತೆರಳಿದ್ದ ಅರ್ಜುನ ಅಂಡ್‌ ಟೀಂ ಕೂಂಬಿಂಗ್‌ ಕಾರ್ಯಾಚರಣೆ ವೇಳೆ ಅರ್ಜುನನನ್ನು ಕಳೆದುಕೊಂಡಿದತ್ತು.

ವಿಧಾಸೌಧದ ಮುಂಭಾಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿ ವಿಶೇಷ ವಿನ್ಯಾಸದೊಂದಿಗೆ ನಿರ್ಮಾಣವಾಗಿರುವ ಮೂರು ಮಿನಿ ಬಸ್‌ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಹಾಸನ ಜಿಲ್ಲೆಯ ಯಸಳೂರಿನಲ್ಲಿ ಅರ್ಜುನ ಮಡಿದ ಸ್ಥಳದಲ್ಲಿ ಸಮಾಧಿ ಹಾಗೂ ಸ್ಮಾರಕ ಹಾಗೂ ಅರ್ಜುನ ವಾಸವಿದ್ದ ಬಳ್ಳೆ ಶಿಬಿರದಲ್ಲಿಯೂ ಅರ್ಜುನನ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು.

ಈ ಎರಡೂ ಸ್ಮಾರಕಗಳ ಬಳಿ ಅರ್ಜುನನ ಪ್ರತಿಕೃತಿ ನಿರ್ಮಿಸಲಾಗುವುದು. ಇದ ಜತೆಗೆ ಅರ್ಜುನ ಅಂಬಾರಿ ಹೊತ್ತ ಚಿತ್ರಗಳು, ವಿವಿಧ ಆನೆ, ಹುಲಿ ಕಾರ್ಯಾಚರಣೆ ವೇಳೆ ಸೆರೆಹಿಡಿದರುವ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಅರ್ಜುನನ ಸಾಹಸ, ಕೊಡುಗೆ ಮತ್ತು ಸೇವೆಯನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲಾಗುವುದು ಎಂದು ಅವರು ನೆನೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

6 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

7 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

7 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

7 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

8 hours ago