ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕರಿಯಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ.
ಇಂದು ಬೆಳಿಗ್ಗೆ ಜಮೀನಿನಲ್ಲಿ ಹಾಕಿದ್ದ ಮೆದೆ ನೋಡಲು ತೆರಳಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ತಕ್ಷಣ ಗಾಯಾಳು ಕರಿಯಪ್ಪ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗಮಧ್ಯೆ ಕರಿಯಪ್ಪ ಕೊನೆಯುಸಿರೆಳೆದಿದ್ದಾರೆ.
ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ಕರಿಯಪ್ಪ ಅವರ ಮೃತದೇಹವನ್ನು ರವಾನಿಸಲಾಗಿದ್ದು, ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.