ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಬೆಳಯನ್ನು ನಾಶಮಾಡಿವೆ. ಚಿಕ್ಕಮಗಳೂರಿನಲ್ಲಿ ರೈತರ ಗೋಳನ್ನು ಯಾರು ಕೇಳುವವರೇ ಇಲ್ಲದಂತಾಗಿದೆ. ಹೇಗೋ ತಾನು ಬೆಳೆದ ಬೆಳೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತರಿಗೆ ಈಗ ಬರಸಿಡಿಲು ಬಡಿದಂತಾಗಿದೆ.
ಚಿಕ್ಕಮಗಳೂರಿನ ಅನೇಕ ಹಳ್ಳಿಗಳಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದ್ದು, ಅನ್ನದಾತ ಭಾರೀ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರೈತರು ಬೆಳೆದ ಬಾಳೆ, ತೆಂಗು, ಅಡಿಕೆ, ಶುಂಠಿ ಸೇರಿದಂತೆ ಹಲವು ಬೆಳೆಗಳನ್ನು ಕಾಡಾನೆಗಳು ತುಳಿದು ತಿಂದು ಹಾಕಿವೆ. ಭಾರೀ ಮಳೆಯಾಗುತ್ತಿರುವ ಸಂದರ್ಭದಲ್ಲಿ ಅನ್ನದಾತ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾನೆ. ಆದರೆ ಕಾಡಾನೆಗಳು ದಾಂಧಲೆ ನಡೆಸಿ ಬೆಳೆ ನಾಶ ಮಾಡುತ್ತಿರುವುದು ರೈತರನ್ನು ಭಾರೀ ನಷ್ಟಕ್ಕೀಡುಮಾಡಿದೆ.
ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿಸಿದ್ರೂ ಏನೂ ಪ್ರಯೋಜನವಾಗ್ತಿಲ್ಲ. ವಿಷಯ ತಿಳಿದರೂ ಕೂಡ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ರೈತರ ಕಷ್ಟ ಆಲಿಸುತ್ತಿಲ್ಲ. ಅರಣ್ಯಾಧಿಕಾರಿಗಳ ನಡೆಯಿಂದ ರೊಚ್ಚಿಗೆದ್ದ ರೈತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಹಾಗೂ ಅರಣ್ಯಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಆದಷ್ಟು ಬೇಗ ಕಾಡಾನೆಗಳ ಹಾವಳಿಯನ್ನು ತಪ್ಪಿಸಬೇಕು. ಕಾಡಾನೆ ಬರದಂತೆ ತಡೆಗೋಡೆ ನಿರ್ಮಿಸಿ, ರೈತರ ಕಷ್ಟಗಳನ್ನು ಆಲಿಸಬೇಕು. ಇದು ಮುಂದುವರಿದರೆ ನಾವು ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಒಟ್ಟಾರೆಯಾಗಿ ಮಾತು ಮಾತಿಗೂ ರೈತರ ಪರ ಎನ್ನುವ ರಾಜ್ಯ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಜಾಣಕುರುಡರಂತೆ ಇರುವ ಅರಣ್ಯಾಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಾ? ಹಾಗೂ ಮುಂದಿನ ದಿನಗಳಲ್ಲಾದ್ರೂ ರೈತರ ಸಂಕಷ್ಟವನ್ನು ದೂರ ಮಾಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…